RDPR Karnataka Ombudsperson Recruitment 2025 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓಂಬುಡ್ಸ್ ಪರ್ಸನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
🌟 New jobs are here. Apply now! 🙏
| Post Title | Last Date to Apply |
|---|---|
CCRH Delhi Group A, B, C Posts Online Form 2025 ![]() | November 25, 2026 |
RDPR Karnataka Ombudsperson Recruitment 2025 : Details of Vacancies
ಹುದ್ದೆ :
ಓಂಬುಡ್ಸ್ ಪರ್ಸನ್ಸ್
ಹುದ್ದೆ ಖಾಲಿಯಿರುವ ಸ್ಥಳ :
ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕಲಬುರಗಿ.
ಅರ್ಹತೆ :
ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ ಮ್ಯಾನೇಜ್ ಮೆಂಟ್ ಇವುಗಳಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕು. ಸಾರ್ವಜನಿಕರೊಂದಿಗೆ ಅಥವಾ ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವು ಒಂದು ಕಡ್ಡಾಯ ಅರ್ಹತೆಯಾಗಿರುತ್ತದೆ.
ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಗರಿಷ್ಠ ವಯಸ್ಸು 66 ವರ್ಷಗಳನ್ನು ಮೀರಿರಬಾರದು.
ವೇತನ :
ಕೇಂದ್ರ/ ರಾಜ್ಯ ಸರ್ಕಾರವು ಹೊರಡಿಸುವ ಆದೇಶಗಳ ಅನುಸಾರ ಸಂಭಾವನೆ, ಸಿಟ್ಟಿಂಗ್ ಫೀಜು ನೀಡಲಾಗುವುದು. ಪ್ರಸ್ತುತ ಮಾಸಿಕ ರೂ. 10000 ಗೌರವಧನ ಹಾಗೂ ಪ್ರತಿ ಸಿಟ್ಟಿಂಗ್ ಗೆ ರೂ. 2250 ದಂತೆ ಗರಿಷ್ಠ ರೂ. 45000 ಮಿತಿಗೊಳಪಟ್ಟು ಸಿಟ್ಟಿಂಗ್ ಫೀಜು ನೀಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ/ ಅಂಚೆ ಮೂಲಕ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ. 1243, ಕೆ.ಎಸ್.ಐ.ಐ.ಡಿ.ಸಿ. ಕಟ್ಟಡ, ಐ.ಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು – 560010
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 02, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 03, 2025
RDPR Karnataka Ombudsperson Recruitment 2025 : Important Links
| NOTIFICATION & APPLICATION FORM | CLICK HERE |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
Discover more from New Govt Job Alert
Subscribe to get the latest posts sent to your email.




