WCD Dakshina Kannada Anganwadi Recruitment 2025 : Details of Vacancies
ಹುದ್ದೆ :
ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
⏳ Last chance! Apply before the deadline. 🚀
| Post Title | Last Date to Apply |
|---|---|
CCRH Delhi Group A, B, C Posts Online Form 2025 ![]() | November 25, 2026 |
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 277 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಅಂಗನವಾಡಿ ಕಾರ್ಯಕರ್ತೆಯರು | 56 |
| ಅಂಗನವಾಡಿ ಸಹಾಯಕಿಯರು | 221 |
ಕರ್ತವ್ಯ ಸ್ಥಳ :
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಕಾರ್ಯಕರ್ತೆ –
ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ –
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025
ವಯೋಮಾನ :
ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಸಡಿಲಿಕೆ :
ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಗುಪ್ತಚರ ಇಲಾಖೆಯಿಂದ ಹುದ್ದೆಗಳ ನೇಮಕಾತಿ 2025
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :
• ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ.
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ.
• ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
• ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.
• ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
• ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
• ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
ನಿಗದಿತ ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 02, 2025
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 10, 2025
WCD Dakshina Kannada Anganwadi Recruitment 2025 : Important Links
| NOTIFICATION | CLICK HERE |
| GUIDELINES | CLICK HERE |
| APPLY ONLINE | CLICK HERE |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
Discover more from New Govt Job Alert
Subscribe to get the latest posts sent to your email.




