KSCCF Recruitment 2025 : ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ಈ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

⏳ Last chance! Apply before the deadline. 🚀

KSCCF Recruitment 2025 : Details of Vacancies

ಹುದ್ದೆ :

ಫಾರ್ಮಾಸಿಸ್ಟ್, ಪ್ರಥಮ ದರ್ಜೆ ಸಹಾಯಕರು, ವಿಕ್ರಯ ಸಹಾಯಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 34 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಫಾರ್ಮಾಸಿಸ್ಟ್ 7
ಪ್ರಥಮ ದರ್ಜೆ ಸಹಾಯಕರು 10
ವಿಕ್ರಯ ಸಹಾಯಕರು 17

ಶೈಕ್ಷಣಿಕ ಅರ್ಹತೆ :

• ಫಾರ್ಮಾಸಿಸ್ಟ್ – ಡಿಪ್ಲೋಮಾ ಇನ್ ಫಾರ್ಮಸಿ.
• ಪ್ರಥಮ ದರ್ಜೆ ಸಹಾಯಕರು – ಯಾವುದೇ ಪದವಿ.
• ವಿಕ್ರಯ ಸಹಾಯಕರು – ದ್ವಿತೀಯ ಪಿಯುಸಿ.

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ :

ಹುದ್ದೆ ವೇತನ
ಫಾರ್ಮಾಸಿಸ್ಟ್ ರೂ. 16,000 – 29,600
ಪ್ರಥಮ ದರ್ಜೆ ಸಹಾಯಕರು ರೂ. 13,600 – 26,000
ವಿಕ್ರಯ ಸಹಾಯಕರು ರೂ. 12,500 – 24,000

ಆಯ್ಕೆ ವಿಧಾನ :

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು‌. ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳನ್ನು ಶೇ.85ಕ್ಕೆ ಇಳಿಸಿ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಒಟ್ಟುಗೂಡಿಸಿ ಪಡೆಯಲಾದ ಒಟ್ಟು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ, ಮೆರಿಟ್ ಪಟ್ಟಿಯ ಆಧಾರದ ಮೇಲೆ ಮೀಸಲಾತಿ ನಿಯಮಗಳನ್ನು ಅನುಸರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ ಅಭ್ಯರ್ಥಿಗಳು – ರೂ. 500
• ಇತರೆ ವರ್ಗದ ಅಭ್ಯರ್ಥಿಗಳು – ರೂ. 1,000

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 16, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 14, 2025
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 14, 2025

KSCCF Recruitment 2025 : Important Links

NOTIFICATION CLICK HERE
APPLY ONLINE CLICK HERE

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Discover more from New Govt Job Alert

Subscribe to get the latest posts sent to your email.

Leave a Reply

Your email address will not be published. Required fields are marked *

Discover more from New Govt Job Alert

Subscribe now to keep reading and get access to the full archive.

Continue reading